
ಬೆಂಗಳೂರು: ಭಾರತ-ಪಾಕಿಸ್ತಾನದ ಸಂಘರ್ಷ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದ್ದು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಯುದ್ಧದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಕೋಸ್ಟಲ್ ಮಾತ್ರವಲ್ಲ ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದ್ದು ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಉದ್ದೇಶದಿಂದ ಕಟ್ಟೆಚ್ಚರ ವಹಿಸಲಾಗಿದೆ.
ಹೀಗಾಗಿ ಯಾವ ಸಂದರ್ಭದಲ್ಲಿ ಏನು ಸಂಭವಿಸುತ್ತದೋ ಎಂಬುದು ಗೊತ್ತಿಲ್ಲ. ಆದ್ದರಿಂದ ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.



















