
ಬೆಂಗಳೂರು: ಸೆಪ್ಟೆಂಬರ್ 6ರಂದು ಮಧ್ಯಾಹ್ನ 1 ಗಂಟೆ ವೇಳೆಗೆ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ಸನ್ ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬಾಲಕ ಸನ್ ರೂಫ್ ತೆರೆದು ನಿಂತಿದ್ದಾಗ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಗ್ಗೆ ಅಂದಾಜು ಸಿಗದ ಚಾಲಕ ಕಾರನ್ನು ಚಲಾಯಿಸಿಕೊಂಡ ಹೋದ ಪರಿಣಾಮ ಕಬ್ಬಿಣದ ಬ್ಯಾರಿಯರ್ ಬಾಲಕನ ತಲೆಗೆ ಬಡಿದಿದ್ದು ಈ ದೃಶ್ಯಗಳು ಮತ್ತೊಂದು ಕಾರಿನ ಡ್ಯಾಶ್ ಡ್ಯಾಮರದಲ್ಲಿ ಸೆರೆಯಾಗಿದೆ.