
ನವದೆಹಲಿ: ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಈ ತೀರ್ಪು ನೀಡಲಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ತಿಳಿಸಿದೆ.
ನ್ಯಾಯಾಲಯವು ರವೀಂದ್ರನ್ ಅವರಿಗೆ ಅಧಿಕಾರಿಗಳಿಗೆ ಶರಣಾಗುವಂತೆ ಹಾಗೂ S$90,000 ಕಾನೂನು ವೆಚ್ಚ ಪಾವತಿಸಲು ಆದೇಶಿಸಿದೆ. ಜೊತೆಗೆ ಸಂಬಂಧಿತ ಕಂಪನಿಯ ಮಾಲೀಕತ್ವದ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಈ ಕುರಿತು ಬೈಜುಸ್ ಸಂಸ್ಥೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಮಧ್ಯೆ, ಅಮೆರಿಕ ಸೇರಿ ಹಲವು ದೇಶಗಳಲ್ಲಿ ಹೂಡಿಕೆದಾರರು ಮತ್ತು ಸಾಲದಾತರು ಬೈಜುಸ್ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. $1.2 ಬಿಲಿಯನ್ ಸಾಲಕ್ಕೆ ಸಂಬಂಧಿಸಿದ ಹಣ ಮರುಪಡೆಯಲು ಪ್ರಯತ್ನಗಳು ನಡೆಯುತ್ತಿವೆ.




























