26.7 C
Udupi
Saturday, March 15, 2025
spot_img
spot_img
HomeBlogಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ

ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ

ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ ಜರುಗಿತು.

ಭಾವಿಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಮಾರಂಭವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಅವರು ಮಾತನಾಡುತ್ತಾ ಇಂದಿನ ಯುವ ಪೀಳಿಗೆ ಸಂಘಟನೆಯಿಂದ ವಿಮುಖರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರನ್ನು ಕೂಡ ಸೇರಿಸಿಕೊಂಡು ಮುಂದುವರಿದಲ್ಲಿ ವಿಪ್ರ ಸಂಘಟನೆಗಳು ಸದೃಢಗೊಳ್ಳುವುದರಲ್ಲಿ ಸಂಶಯವಿಲ್ಲ ಎಂದು ಅಭಿಪ್ರಾಯಪಟ್ಟರು. ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಹರಿಶ್ಚಂದ್ರ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀ ಸಂದೀಪ್ ಕುಮಾರ್ ಮಂಜ ಮತ್ತು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀ ಮಂಜುನಾಥ ಉಪಾಧ್ಯಾಯ ಪರ್ಕಳ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭಾಶಂಸನೆಗೈದರು.

ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ

ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ ಜರುಗಿತು. ಭಾವಿಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಮಾರಂಭವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಅವರು ಮಾತನಾಡುತ್ತಾ ಇಂದಿನ ಯುವ ಪೀಳಿಗೆ ಸಂಘಟನೆಯಿಂದ ವಿಮುಖರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರನ್ನು ಕೂಡ ಸೇರಿಸಿಕೊಂಡು ಮುಂದುವರಿದಲ್ಲಿ ವಿಪ್ರ ಸಂಘಟನೆಗಳು ಸದೃಢಗೊಳ್ಳುವುದರಲ್ಲಿ ಸಂಶಯವಿಲ್ಲ ಎಂದು ಅಭಿಪ್ರಾಯಪಟ್ಟರು. ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಹರಿಶ್ಚಂದ್ರ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀ ಸಂದೀಪ್ ಕುಮಾರ್ ಮಂಜ ಮತ್ತು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀ ಮಂಜುನಾಥ ಉಪಾಧ್ಯಾಯ ಪರ್ಕಳ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭಾಶಂಸನೆಗೈದರು. ಅನೇಕ ವರ್ಷಗಳಿಂದ ಗೋಸೇವೆ ಮಾಡುತ್ತಿರುವ ಸುಜಾತ ಬಾಲಕೃಷ್ಣ ಪುತ್ತೂರು, ರವಿಕಾಂತ್ ಭಟ್ ನಿಟ್ಟೂರು ಮತ್ತು ರಾಧಾಕೃಷ್ಣ ಭಟ್ ಪುತ್ತೂರು ಇವರನ್ನು ಗೋಪಾಲಕರ ನೆಲೆಯಲ್ಲಿ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು II ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಲಯದ ವಿದ್ಯಾರ್ಥಿಗಳಾದ ಭಾರ್ಗವಿ ರಾವ್ ಜಿ, ಕಾರುಣ್ಯ ಸೋಮಯಾಜಿ, ಮಾನ್ಯ ತಂತ್ರಿ ಪುತ್ತೂರು, ನೀರಜ್ ಬಾಲಾಜಿ ಬಾಲ್ತಿಲ್ಲಾಯ, ಸಂಚಿತಾ ಜಿ. ಭಟ್, ಅಂಕಿತಾ ಭಟ್, ಮಹಿಮಾ ರಾವ್, ವೈಭವಿ ಆಚಾರ್ಯ, ಪ್ರಮಥ್ ಭಾಗವತ್ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಆಪತ್ಬಾಂಧವ ಸಮಿತಿಯ ವತಿಯಿಂದ ಅಶಕ್ತರಿಗೆ ವೈದ್ಯಕೀಯ ಧನಸಹಾಯವಾಗಿ ರೂ.30,000 ಹಸ್ತಾಂತರಿಸಲಾಯಿತು. ಆಪದ್ಬಾಂಧವ ಸಮಿತಿಗೆ ಹೆಚ್ಚಿನ ರೀತಿಯಲ್ಲಿ ಧನಸಹಾಯ ನೀಡಿದ ದಾನಿಗಳನ್ನು ಗುರುತಿಸಿ ಗೌರವಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನೂತನ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು. ಮೇ ತಿಂಗಳಲ್ಲಿ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿದ ದಂಪತಿಗಳನ್ನು ಗುರುತಿಸಲಾಯಿತು. ಕಳೆದ ಅವಧಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ವಿಶೇಷ ಸಹಕಾರ ನೀಡಿದವರನ್ನು ವಲಯದ ವತಿಯಿಂದ ಗೌರವಿಸಲಾಯಿತು. 2024-25 ನೇ ಸಾಲಿನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಲಾಯಿತು. ಸುನೀತಾ ಚೈತನ್ಯ, ಅನುಪಮಾ, ಸೌದಾಮಿನಿ ರಾವ್, ಸುರೇಶ್ ಕಾರಂತ್, ವಿಜಯ್ ಕುಮಾರ್, ರಾಮದಾಸ ಉಡುಪ, ಚಂದ್ರಶೇಖರ ಅಡಿಗ, ಎಂ.ಆರ್. ಆಚಾರ್ಯ, ಆಪತ್ಬಾಂಧವ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಉಡುಪ, ಕೋಶಾಧಿಕಾರಿ ಕೃಷ್ಣಪ್ರಸಾದ್ ಕಾರಂತ್ ಸಹಕರಿಸಿದರು. ಸಭಾ ಕಾರ್ಯಕ್ರಮದ ಮೊದಲು ಉಡುಪಿ ಜಿಲ್ಲಾ ಕೃಷಿಕ ಸಂಘದ ಕರಂಬಳ್ಳಿ ವಲಯದ ಸಹಯೋಗದಲ್ಲಿ ಮನೆಮನೆಯಲ್ಲಿ ಮಲ್ಲಿಗೆ ಕೃಷಿ, ವೈಜ್ಞಾನಿಕ ಪದ್ಧತಿಯಲ್ಲಿ ಲಾಭದಾಯಕ ಮಲ್ಲಿಗೆ ಹಾಗೂ ತೋಟಗಾರಿಕಾ ಹಣ್ಣಿನ ಬೆಳೆಯ ಸಮಗ್ರ ಮಾಹಿತಿ ಶಿಬಿರ ಏರ್ಪಡಿಸಲಾಗಿತ್ತು. ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷರಾದ ಬಂಟಕಲ್ಲು ರಾಮಕೃಷ್ಣ ಶರ್ಮ ಮತ್ತು ಕಾರ್ಯದರ್ಶಿ ಕುದಿ ಶ್ರೀನಿವಾಸ್ ಭಟ್ ಹಾಗೂ ಶ್ರೀಪತಿ ಭಟ್ ಕರಂಬಳ್ಳಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷೆ ಶುಭಾ ಬಾಳ್ತಿಲ್ಲಾಯ ಪ್ರಸ್ತಾವನೆಗೈದು ಸ್ವಾಗತಿಸಿದರು. ಜಯಲಕ್ಷ್ಮಿ ಭಟ್ ಪ್ರಾರ್ಥಿಸಿದರು. ಕಾರ್ಯದರ್ಶಿ ಮಂಜುಳಾ ವಿ. ಪ್ರಸಾದ್ ವಾರ್ಷಿಕ ವರದಿ ಮಂಡಿಸಿದರು. ಚೈತನ್ಯ ಎಂ.ಜಿ. ನಿರೂಪಿಸಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಹಾಸಭಾ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page