
ಬೆಂಗಳೂರು: ಮೇ 6ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ಹಾಗೂ ಯುವ ಕಾಂಗ್ರೆಸ್ ಕಾರ್ಕಳ ಇದರ ಆಶ್ರಯದಲ್ಲಿ ಎಲ್‌ಪಿಜಿ ದರ ಹೆಚ್ಚಳದ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.
ಇತ್ತೀಚೆಗೆ ಅಡುಗೆ ಅನಿಲದ ದರದಲ್ಲಿ ಭಾರೀ ಏರಿಕೆ ಆಗಿದ್ದು, ಸಾಮಾನ್ಯ ಜನರ ಜೀವನಕ್ಕೆ ಇದು ದೊಡ್ಡ ಹೊರೆ ತಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೇಂದ್ರ ಬಿಜೆಪಿ ಸರ್ಕಾರದ ನೀತಿಗಳೇ ಈ ಪರಿಸ್ಥಿತಿಗೆ ಕಾರಣವೆಂದು ಟೀಕಿಸಿರುವ ಕಾಂಗ್ರೆಸ್, ಜನ ವಿರೋಧಿ ನಿರ್ಧಾರಗಳ ವಿರುದ್ಧ ಬೀದಿಗಿಳಿಯಲು ಸಿದ್ಧವಾಗಿದೆ.
ಪ್ರತಿಭಟನೆ ಮೇ 6, 2026 ಬುಧವಾರ ಸಂಜೆ 5 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಕ್ಷ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.




















