25.4 C
Udupi
Friday, August 15, 2025
spot_img
spot_img
HomeBlogಭಯೋತ್ಪಾದನೆ ಮತ್ತು ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಭಯೋತ್ಪಾದನೆ ಮತ್ತು ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 79ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಕೆಂಪು ಕೋಟೆಯಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದು ಈ ವೇಳೆ ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ ಎಂದು ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.

ಪೆಹಲ್ಗಾಮ್‌ನಲ್ಲಿ ಧರ್ಮ ಕೇಳಿ ಭಯೋತ್ಪಾದಕ ದಾಳಿ ನಡೆಸಿ ಹತ್ಯೆ ಮಾಡಲಾಯಿತು. ಪತ್ನಿ ಎದುರು ಪತಿಯನ್ನು, ಮಗನ ಮುಂದೆ ತಂದೆಯನ್ನು ಹತ್ಯೆ ಮಾಡಲಾಯಿತು. ಇಡೀ ದೇಶದಲ್ಲಿ ಆಕ್ರೋಶ ಮಡುಗಟ್ಟಿತ್ತು. ಆಪರೇಷನ್ ಸಿಂಧೂರ ಈ ಆಕ್ರೋಶದ ಪ್ರತಿಬಿಂಬವಾಗಿತ್ತು. ನಾವು ನಮ್ಮ ಸೇನೆಗೆ ದಾಳಿ, ಸಮಯ, ಗುರಿ ಎಲ್ಲವನ್ನು ನಿರ್ಧರಿಸಲು ಸ್ವಾತಂತ್ರ‍್ಯ ನೀಡಲಾಯಿತು. ಪಾಕಿಸ್ತಾನದ ಒಳಗೆ ನುಗ್ಗಿ ದಾಳಿ ಮಾಡಿದ್ದು ಇದರಿಂದ ಪಾಕಿಸ್ತಾನಕ್ಕೆ ಆದ ನಷ್ಟ ಎಷ್ಟಿದೆ ಅಂದರೆ ನಿತ್ಯ ಹೊಸ ಮಾಹಿತಿ ಬರ್ತಿದೆ ಎಂದು ತಿಳಿಸಿದ್ದಾರೆ.

ದಶಕಗಳಿಂದ ನಮ್ಮ ದೇಶವು ಭಯೋತ್ಪಾದನೆಯನ್ನು ಸಹಿಸಿಕೊಂಡಿದೆ. ಈಗ ನಾವು ಹೊಸ ನಿರ್ಧಾರ ತೆಗೆದುಕೊಂಡಿದ್ದು ಭಯೋತ್ಪಾದನೆ ಮತ್ತು ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವರು ಮಾನವತವಾದದ ವಿರುದ್ಧ ವ್ಯಕ್ತಿಗಳು. ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗುವುದಿಲ್ಲ. ಇಂತಹ ಬೆದರಿಕೆ ಬಹಳ ವರ್ಷಗಳಿಂದ ನೋಡಿದ್ದೇವೆ. ಇಂತಹದೇ ಘಟನೆ ಮುಂದುವರಿದರೆ ಮತ್ತೆ ನಮ್ಮ ಸೇನೆ ಪ್ರತಿಕ್ರಿಯೆ ನಿರ್ಧಾರ ಮಾಡಲಿದೆ. ನಾವು ಸರಿಯಾದ ಪ್ರತಿಕ್ರಿಯೆ ನೀಡಲಿದ್ದೇವೆ. ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಸಿಂಧೂ ಜಲ ಒಪ್ಪಂದದಿಂದ ಭಾರತಕ್ಕೆ ಅನ್ಯಾಯವಾಗಿದೆ. ಭಾರತದಲ್ಲಿ ಹರಿಯುವ ನದಿ ನಮ್ಮ ಬಳಕೆಗೆ ಸಿಗುತ್ತಿಲ್ಲ. ನಮ್ಮ ಜನರು ನೀರಿದ್ದರೂ ಬಾಯಾರಿಕೊಂಡಿದ್ದಾರೆ. ಏಕಮುಖ ನ್ಯಾಯವನ್ನು ಈ ಒಪ್ಪಂದದಲ್ಲಿ ಮಾಡಿದೆ. ಭಾರತದ ನೀರಿನ ಮೇಲಿನ ಅಧಿಕಾರ ಭಾರತ ಮತ್ತು ನಮ್ಮ ರೈತರದ್ದು. ರೈತರ ಹಿತ, ರಾಷ್ಟ್ರದ ಹಿತದ ಕಾರಣ ಈ ಒಪ್ಪಂದಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page