
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ಬಕ್ಕರ್ವಾಲಾ ಆನಂದ್ ಧಾಮ್ ಆಶ್ರಮದಲ್ಲಿ ಸನಾತನ ಸಂಸ್ಕೃತಿ ಜಾಗರಣ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ್ದು ಈ ವೇಳೆ ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ. ನಾನು ನಿಮಗೆ ಭರವಸೆ ನೀಡುತ್ತೇನೆ ಮೋದಿ ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತದೆ ಎಂದು ಪಾಕ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.
ರಕ್ಷಣಾ ಸಚಿವರಾಗಿ, ನನ್ನ ಸೈನಿಕರೊಂದಿಗೆ ದೇಶದ ಗಡಿಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಜವಾಬ್ದಾರಿಯಾಗಿದೆ. ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಏನು ಬೇಕಾದರೂ ಆಗುತ್ತದೆ. ನೀವೆಲ್ಲರೂ ನಮ್ಮ ಪ್ರಧಾನಿಯನ್ನ ಚೆನ್ನಾಗಿ ತಿಳಿದಿದ್ದೀರಿ, ಅವರ ಕಾರ್ಯಶೈಲಿ, ದೃಢಸಂಕಲ್ಪದ ಬಗ್ಗೆಯೂ ನಿಮಗೆ ಚೆನ್ನಾಗಿ ತಿಳಿದಿದೆ. ಹಾಗಾಗಿ ನಿಮಗೆ ಭರವಸೆ ನೀಡುತ್ತೇನೆ, ಮೋದಿ ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತದೆ ಎಂದು ಹೇಳಿದರು.