
ಹೊಸದಿಲ್ಲಿ: ಅಮೆರಿಕ ಮತ್ತು ಭಾರತ ನಡುವಿನ ವ್ಯಾಪಾರ ಬಿಕ್ಕಟ್ಟಿನಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇರಿರುವ ಸುಂಕದಿಂದ ಭಾರತಕ್ಕೆ ಆರ್ಥಿಕ ಒತ್ತಡ ಹೆಚ್ಚುತ್ತಿದ್ದು ಇದೀಗ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತಿರುವ ಭಾರತದ ಮೇಲೆ ಹೊಸ ಸುಂಕಗಳನ್ನು ವಿಧಿಸುವ ಬಗ್ಗೆ ಡೋನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ.
ಭಾನುವಾರ ಏರ್ ಫೋರ್ಸ್ ಒನ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ‘ಪ್ರಧಾನಿ ಮೋದಿ ಬಹಳ ಒಳ್ಳೆಯ ವ್ಯಕ್ತಿ. ಆದರೆ ನಾನು ಸಂತೋಷವಾಗಿಲ್ಲ ಎಂದು ಅವರಿಗೆ ತಿಳಿದಿದೆ. ನನ್ನನ್ನು ಸಂತೋಷಪಡಿಸುವುದು ಮುಖ್ಯವಾಗಿತ್ತು. ಅವರು ವ್ಯಾಪಾರ ಮುಂದುವರಿಸಿದ್ದಾರೆ ಮತ್ತು ನಾವು ಅವರ ಮೇಲೆ ಶೀಘ್ರದಲ್ಲಿ ಸುಂಕವನ್ನು ಹೆಚ್ಚಿಸಬಹುದು’ ಎಂದು ಹೇಳಿದ್ದಾರೆ.



















