28.1 C
Udupi
Thursday, May 7, 2026
spot_img
spot_img
HomeBlogಭಾರತೀಯ ವಲಸಿಗರನ್ನು ಗಡಿಪಾರು ಮಾಡಲು ಮುಂದಾದ ಟ್ರಂಪ್ ಸರ್ಕಾರ..!

ಭಾರತೀಯ ವಲಸಿಗರನ್ನು ಗಡಿಪಾರು ಮಾಡಲು ಮುಂದಾದ ಟ್ರಂಪ್ ಸರ್ಕಾರ..!

ಇತ್ತೀಚೆಗಷ್ಟೇ ಅಮೆರಿಕಾದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್‌ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದು ಇದರ ಬೆನ್ನಲ್ಲೇ ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ನಿರ್ಧರಿಸಿದೆ. ಈಗಾಗಲೇ 500 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿದ್ದು ಇದೀಗ ಅದರ ಎರಡನೇ ಭಾಗದ ಕಾರ್ಯಾಚರಣೆ ಮುಂದುವರೆಯುತ್ತಿದೆ.

ಅಕ್ರಮ ವಲಸಿಗರನ್ನು ಹೊತ್ತ ಮಿಲಿಟರಿ ಸಿ -17 ವಿಮಾನವು ಭಾರತಕ್ಕೆ ಹೊರಟಿದ್ದು ಆದರೆ ಕನಿಷ್ಠ 24 ಗಂಟೆಗಳಾದರೂ ಅದು ತಲುಪಲಿಲ್ಲ ಎಂದು ಹೇಳಿದರು. ಅಮೆರಿಕದ ಇತಿಹಾಸದಲ್ಲಿಯೇ ಅತಿ ಹೆಚ್ಚು ಮಂದಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದು ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪ್ಯೂ ಸಂಶೋಧನಾ ಕೇಂದ್ರದ ಅಂಕಿಅಂಶಗಳ ಪ್ರಕಾರ, ಭಾರತದಿಂದ ಬಂದ ಸರಿಸುಮಾರು 7,25,000 ಅಕ್ರಮ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ದಾಖಲೆರಹಿತ ಭಾರತೀಯರನ್ನು ತಮ್ಮ ದೇಶಕ್ಕೆ ಕಾನೂನುಬದ್ಧವಾಗಿ ಹಿಂದಕ್ಕೆ ಕರೆದುಕೊಳ್ಳಲು ಭಾರತ ಯಾವಾಗಲೂ ಸಿದ್ಧವಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದ್ದು ಪ್ರತಿಯೊಂದು ದೇಶದಲ್ಲೂ, ಮತ್ತು ಅಮೆರಿಕವೂ ಇದಕ್ಕೆ ಹೊರತಾಗಿಲ್ಲ, ನಮ್ಮ ನಾಗರಿಕರಲ್ಲಿ ಯಾರಾದರೂ ಅಕ್ರಮವಾಗಿ ಅಲ್ಲಿಗೆ ಬಂದರೆ ಮತ್ತು ಅವರು ನಮ್ಮ ನಾಗರಿಕರು ಎಂದು ನಮಗೆ ಖಚಿತವಾಗಿದ್ದರೆ, ಅವರು ಭಾರತಕ್ಕೆ ಕಾನೂನುಬದ್ಧವಾಗಿ ಮರಳಲು ನಾವು ಅವಕಾಶ ಮಾಡಿಕೊಡುತ್ತೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page