
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸುವ ಮೂಲಕ ಭಯೋತ್ಪಾದಕರ ಅಡಗು ತಾಣಗಳನ್ನು ಧ್ವಂಸಗೊಳಿಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಾ ಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ದೇಶದ ಸೈನಿಕರ ಕ್ಷೇಮ ಮತ್ತು ಮುಂದೆ ನಡೆಯುವ ಯುದ್ಧದಲ್ಲಿ ಭಾರತೀಯ ಸೈನಿಕರಿಗೆ ಯಾವುದೇ ಪ್ರಾಣಪಾಯ ಆಗದೆ ಗೆಲವು ಸಿಗಲಿ ಎಂಬ ಸಂಕಲ್ಪದೊಂದಿಗೆ ರಾಜ್ಯ ಸರ್ಕಾರದಿಂದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ಆದೇಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.