
ಚಿಕ್ಕಮಗಳೂರು: ಗಾಳಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಸಮೀಪ ಗಾಳಿ ಮಳೆಯ ಹೊಡೆತಕ್ಕೆ ಬೃಹತ್ ಮರ ಒಂದು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪರಿಣಾಮ ಮುಳ್ಳಯ್ಯನಗಿರಿ, ದತ್ತ ಪೀಠಕ್ಕೆ ತೆರಳುವ ರಸ್ತೆ ಬಂದ್ ಆಗಿದೆ.
ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದು ಮರ ತೆರವುಗೊಳಿಸಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.