
ಉಡುಪಿ: ವರುಣನ ಆರ್ಭಟದಿಂದ ಇತ್ತೀಚೆಗಷ್ಟೇ ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಜುಲೈ 10ರಂದು ಹಲವು ರೈಲುಗಳ ಸಂಚಾರ ವ್ಯತ್ಯಯವಾಗಿದ್ದು ಇದೀಗ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ 14 ಗಂಟೆಗಳ ಕಾಲ ಹಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ.
ಮಂಗಳೂರು ಎಕ್ಸ್‌ಪ್ರೆಸ್, ಕೊಂಕಣ ಕನ್ಯಾ ಎಕ್ಸ್‌ಪ್ರೆಸ್, ತುಟಾರಿ ಎಕ್ಸ್‌ಪ್ರೆಸ್, ಜನಶತಾಬ್ದಿ ಎಕ್ಸ್‌ಪ್ರೆಸ್, ದಿವಾ ಸಾವಂತವಾಡಿ ಎಕ್ಸ್‌ಪ್ರೆಸ್, ಸಾವಂತವಾಡಿ ಮಡಗಾಂವ್ ಪ್ಯಾಸೆಂಜರ್ ರೈಲು ಸೇವೆ ನಿಂತಿದೆ. ಇನ್ನು ಕರಾವಳಿ ಭಾಗದ 12134 ಸೂಪರ್ ಎಕ್ಸ್‌ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ಕ್ಯಾನ್ಸಲ್ ಆಗಿದೆ. 12620 ಮತ್ಸ್ಯ ಗಂಧ ಮಂಗಳೂರು ಟು ಮುಂಬೈ ರೈಲು ಕ್ಯಾನ್ಸಲ್ ಆಗಿದ್ದು ಇದರಿಂದ ಕರ್ನಾಟಕದ ರೈಲು ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ.
ಮಂಗಳೂರು ಎಕ್ಸ್‌ಪ್ರೆಸ್, ಕೊಂಕಣ ಕನ್ಯಾ ಎಕ್ಸ್‌ಪ್ರೆಸ್, ತುಟಾರಿ ಎಕ್ಸ್‌ಪ್ರೆಸ್, ಜನಶತಾಬ್ದಿ ಎಕ್ಸ್‌ಪ್ರೆಸ್, ದಿವಾ ಸಾವಂತವಾಡಿ ಎಕ್ಸ್‌ಪ್ರೆಸ್, ಸಾವಂತವಾಡಿ ಮಡಗಾಂವ್ ಪ್ಯಾಸೆಂಜರ್ ರೈಲು ಸೇವೆ ನಿಂತಿದೆ. ಇನ್ನು ಕರಾವಳಿ ಭಾಗದ 12134 ಸೂಪರ್ ಎಕ್ಸ್‌ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ಕ್ಯಾನ್ಸಲ್ ಆಗಿದೆ. 12620 ಮತ್ಸ್ಯ ಗಂಧ ಮಂಗಳೂರು ಟು ಮುಂಬೈ ರೈಲು ರದ್ದಾಗಿದೆ.
ಬೋಗ್ದ್ಯಾದಲ್ಲಿ ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲೇ ರಾತ್ರಿ ಕಳೆಯುವಂತಾಗಿತ್ತು. ನೂರಾರು ಪ್ರಯಾಣಿಕರು ಕೊಂಕಣ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದಾರೆ.
ಕೊಂಕಣ, ಮಧ್ಯ ಮಹಾರಾಷ್ಟ್ರ ಘಟಮತ್ಯವಾರದಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ವಿದರ್ಭದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರಿಂದಾಗಿ ಘಾಟ್ ಪ್ರವಾಸೋದ್ಯಮಕ್ಕೆ ಭೇಟಿ ನೀಡುವಾಗ ಜಾಗರೂಕರಾಗಿರಿ ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ





