
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿತ ಉಂಟಾಗಿದೆ.
ಗುಡ್ಡ ಕುಸಿತದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ರಾತ್ರಿ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸರು ಚಿಕ್ಕಮಂಗಳೂರಿನ ಕೊಟ್ಟಿಗೆಹಾರದಲ್ಲಿ ವಾಹನಗಳನ್ನು ತಡೆದು ವಾಪಾಸು ಕಳಿಸಿದ್ದು, ಇತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.











