
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು ,ಮುಂಜಾಗ್ರತಾ ಕ್ರಮವಾಗಿ ನಾಳೆ (ಜೂನ್ 17) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢಶಾಲೆ, ಪದವಿಪೂರ್ವ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3 ಎಂದಿನಂತೆ ನಡೆಯಲಿದೆ.



















