
ಚಿಕ್ಕಮಗಳೂರು: ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಭಾರಿ ಮಳೆಯ ಹಿನ್ನೆಲೆ ಮತ್ತೆ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಅಧಿಕಾರಿಗಳು ಗುಡ್ಡ ಕುಸಿತದ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದು ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎನ್ನಲಾಗಿದೆ.
ಚಾರ್ಮಾಡಿ ಘಾಟಿಯ ಎಂಟನೇ ಮತ್ತು 9ನೇ ತಿರುವಿನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಮಳೆಯ ನೀರಿನ ಜೊತೆ, ಕಲ್ಲುಗಳು ರಸ್ತೆಗಳಿಗೆ ತೇಲಿಕೊಂಡು ಬಂದಿದೆ.













