
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆಯು ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆ ಹಿನ್ನೆಲೆ ರಾಜ್ಯ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆಯು ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಸೂಚಿಸಿದೆ.
ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು ಮಂಕಿಪಾಕ್ಸ್ ಶಂಕಿತರು ಕಂಡು ಬಂದರೆ ಶಂಕಿತ ಮಾದರಿಗಳನ್ನ ಬಿಎಮ್ ಸಿ ಲ್ಯಾಬ್ ಕಳಿಸುವಂತೆ ತಿಳಿಸಿದೆ.
ಈ ರೋಗ ಲಕ್ಷಣಗಳು ಕಂಡು ಬಂದರೆ 21 ದಿನಗಳ ಕ್ವಾರಂಟೈನ್ ಗುಳ್ಳೆಗಳು ಸಂಪೂರ್ಣ ವಾಸಿಯಾಗುವರೆಗೂ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಸೋಂಕಿತರು ಮತ್ತೊಬ್ಬರ ಸಂಪರ್ಕಕ್ಕೆ ಬಾರದಂತೆ ಕ್ವಾರಂಟೈನ್‌ನಲ್ಲಿ ಇರಿಸಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದೆ.













