
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಸಮೀಪದ ಅಪಾರ್ಟ್ಮೆಂಟ್ವೊಂದರಲ್ಲಿ ನಾಲ್ಕನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ಮೂಲದ ಮಹಾಲಕ್ಷ್ಮಿ ಮೃತ ವಿದ್ಯಾರ್ಥಿನಿ. ಅವರು ಸುರತ್ಕಲ್ನ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತೆಯೊಂದಿಗೆ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.














































