
ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದು, ಹೆರಿಗೆಯ ಸಂದರ್ಭದಲ್ಲಿ ಮಗು ಮೃತಪಟ್ಟಿದ್ದು, ಇದೀಗ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ.
ಕಾರ್ಕಳದ ರಂಜಿತಾ (28) ಹೆರಿಗೆಂದು ಕಾರ್ಕಳ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಲೇಡಿ ಗೋಷನ್ ಗೆ ದಾಖಲಿಸಲಾಗಿತ್ತು . ಹೆರಿಗೆಯ ಸಂದರ್ಭದಲ್ಲಿ ಮಗು ಮೃತಪಟ್ಟಿದೆ. ಮಹಿಳೆ ಆರೋಗ್ಯವಾಗಿದ್ದು, ವೈದ್ಯರು ಇಂದು ಡಿಸ್ಚಾರ್ಜ್ ಮಾಡುವಂತೆ ಸೂಚನೆ ನೀಡಿದ್ದರು. ಆದರೆ ಇದೀಗ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿದ್ದು, ಅವರನ್ನು ಕೂಡಲೇ ವೆಲ್ಲಾಕ್ ಆಸ್ಪತ್ರೆಗೆ ದಾಖಲಿಸಿದರು ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.



















