
ಮಂಗಳೂರು: ಡಿಸೆಂಬರ್ 28 ಮತ್ತು 29 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಆಡಳಿತವು ಬೀಚ್ ಉತ್ಸವಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಿಕೊಂಡಿದ್ದು ಆದರೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವವನ್ನು ಮುಂದೂಡಿ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಿದೆ ಎಂದು ತಿಳಿಸಿದೆ.




