31.6 C
Udupi
Saturday, February 22, 2025
spot_img
spot_img
HomeBlogಮಕ್ಕಳ ಸುರಕ್ಷತೆ ಆದ್ಯ ಕರ್ತವ್ಯ – ಪಿಎಸ್ಐ ಪ್ರತಿಭಾ

ಮಕ್ಕಳ ಸುರಕ್ಷತೆ ಆದ್ಯ ಕರ್ತವ್ಯ – ಪಿಎಸ್ಐ ಪ್ರತಿಭಾ

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

ಕಲ್ಲಬೆಟ್ಟು : ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ “ವೀರೆ- ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ” ಕಾರ್ಯಕ್ರಮವು ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ಉದ್ಘಾಟನೆಯಾಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಅವರು ಹೆಣ್ಣುಮಕ್ಕಳ
ಸುರಕ್ಷತೆಯ ಅವಶ್ಯಕತೆ, ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ತರಬೇತಿಗಳ ಮಹತ್ವವನ್ನು ವ್ಯಕ್ತಪಡಿಸುತ್ತ ಅವರ ಹಕ್ಕುಗಳ
ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಸಮಾಜದ ಮತ್ತು ಶಿಕ್ಷಣ ಸಂಸ್ಥೆಗಳ ಪಾತ್ರ ಮತ್ತು ಪ್ರಾಮುಖ್ಯತೆ
ಕುರಿತು ಮಾತನಾಡಿದ ಅವರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರ ಸಮಾಜಮುಖಿ ಕಾರ್ಯಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಚಾರ್ಯ ಎಸ್. ಜಿ. ಹಿರೇಮಠ್
ಅವರು ಮಕ್ಕಳಲ್ಲಿ ಸ್ವಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ತರಬೇತಿಯು ಪ್ರಮುಖ ಪಾತ್ರ ವಹಿಸಲಿದೆ.
ಹೆಣ್ಣು ಸುರಕ್ಷಿತ ವಲಯದಲ್ಲಿ ಬದುಕುತ್ತ ಸಮಾಜದ ಶಕ್ತಿಯಾಗಿ ರೂಪುಗೊಳ್ಳಬೇಕು. ಮಕ್ಕಳಲ್ಲಿ ಶಕ್ತಿ ಸ್ಫೂರ್ತಿಯನ್ನು
ತುಂಬುವ ಎಕ್ಸಲೆಂಟ್ ಸಂಸ್ಥೆಯ ಸಂಕಲ್ಪ ಅಭಿನಂದನೀಯ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಮಾತನಾಡುತ್ತಾ,
ಹೆಣ್ಣು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಬಲಳಾದಾಗ ಸಮಾಜವು ಸಶಕ್ತವಾಗಿ ರೂಪುಗೊಳ್ಳುತ್ತದೆ. ಹೆಣ್ಣು ಮಕ್ಕಳು ತಮ್ಮ
ಹಕ್ಕುಗಳು, ಅವಕಾಶಗಳು ಮತ್ತು ಸಬಲೀಕರಣದ ಬಗ್ಗೆ ಅರಿವು ಹೊಂದಿದಾಗ ಮಾತ್ರ ಸಮಾನತೆಯ ಸಮಾಜವನ್ನು
ನಿರ್ಮಿಸಬಹುದು. ವಿವಿಧ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸುತ್ತಾ ಕೌಶಲಗಳನ್ನು ಬಳಕೆ ಮಾಡಿಕೊಂಡು
ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವತ್ತ ಹೆಣ್ಣು ಯೋಚಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಈ ಕಾರ್ಯಕ್ರಮದ
ಯೋಜನೆಯನ್ನು ಪ್ರಸ್ತುತಪಡಿಸಿದರು.
ಸಭಾ ಕಾರ್ಯಕ್ರಮದ ನಂತರ ಇಂಚರ ಫೌಂಡೇಷನ್ (R) ಸಂಸ್ಥೆಯ ಸಿಬ್ಬಂದಿ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಭಾರ ನಿಲಯ ಪಾಲಕಿ ಆಶಾಲತಾ ಮತ್ತು ವಿದ್ಯಾರ್ಥಿ
ಪ್ರತಿನಿಧಿ ಕು. ಚೈತ್ರಾ ಪಾಟೀಲ್ ಉಪಸ್ಥಿತರಿದ್ದರು. ಉಪನ್ಯಾಸಕ ತೇಜಸ್ವೀ ಭಟ್ ಕಾರ್ಯಕ್ರಮ ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page