ಬಾಲಕ ಸೇರಿದಂತೆ ಪೋಷಕರ ವಿರುದ್ಧ ಪೊಲೀಸ್ ಕೇಸ್ ದಾಖಲು

ಮಣಿಪಾಲ: ಪರ್ಕಳದ ನೇತಾಜಿ ನಗರದಲ್ಲಿ ಅಪ್ರಾಪ್ತ ಬಾಲಕ ಚಾಲನೆ ಮಾಡುತ್ತಿದ್ದ ಕಾರು ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಸಂಬಂಧ ಬಾಲಕ ಹಾಗೂ ಕಾರು ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ನೇತಾಜಿ ನಗರದಿಂದ ಪ್ರಗತಿ ನಗರದ ಕಡೆಗೆ ಕಾರು ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕನ ನಿಯಂತ್ರಣ ತಪ್ಪಿ ಮನೆಯ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಕಂಪೌಂಡ್‌ಗೆ ಬಡಿದು ಹಾನಿಗೊಳಗಾಗಿದೆ.
ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ನೀಡಿದ ಆರೋಪದಡಿ ಕಾರು ಮಾಲೀಕ ಸಲೀಂ ಹಾಗೂ ಬಾಲಕನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















































































