
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಬಸವನಗುಡಿ ಬೆಂಗಳೂರಿನಲ್ಲಿಆಯೋಜಿಸಿದ ರಾಜ್ಯಮಟ್ಟದ ವಾಟರ್ ಪೋಲೋ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪಾರ್ಥ ಜೆ ಗೌಡ ರಾಜ್ಯಮಟ್ಟದ ವಾಟರ್
ಪೋಲೊ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರು ಹಾಸನ ಜಿಲ್ಲೆಯ ಅರಸೀಕೆರೆಯ ದಾಸನಹಳ್ಳಿಯ ಡಿ.ಜೆ. ಜಗದೀಶ್ ಹಾಗೂ ಸುಜಾತ ಎಸ್.ಎಸ್. ದಂಪತಿಗಳ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್
ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು,ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.






















































