
ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿಪ್ರಾಯ ಪಟ್ಟಿದ್ದಾರೆ. ಅವರು ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಆಯೋಜಿಸಿದ ವಿಷಯಾಧಾರಿತ ಉಪನ್ಯಾಸಕರ(ಇತಿಹಾಸ, ವಾಣಿಜ್ಯಶಾಸ್ತ್ರ, ರಾಜ್ಯ ಶಾಸ್ತ್ರ ಕನ್ನಡ) 2 ದಿನಗಳ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಮಾರುತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರಕ್ಕೆ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಸರಕಾರಿ ಪ.ಪೂ. ಉಡುಪಿ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀ ಡಿ.ಕೆ. ಮೊಗೇರ, ಜಿಲ್ಲಾ ಸಂಯೋಜಕರಾದ ವರ್ಗೀಸ್, ವಾಣಿಜ್ಯ ಶಾಸ್ತç ಜಿಲ್ಲಾ ಸಂಯೋಜಕರಾದ ಚಂದ್ರಕಲಾ, ರಾಜ್ಯಶಾಸ್ತç ಜಿಲ್ಲಾ ಸಂಯೋಜಕರಾದ ವಾಸು ಮೊಗೇರ, ಇತಿಹಾಸ ವಿಭಾಗದ ಜಿಲ್ಲಾ ಸಂಯೋಜಕರಾದ ಶ್ರೀಮತಿ ಗ್ರೇಸಿ, ಕನ್ನಡ ವಿಭಾಗದ ಜಿಲ್ಲಾ ಸಂಯೋಜಕರಾದ ಉದಯ ಕುಮಾರ್ ಶೆಟ್ಟಿ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಎಂ ಕೊಡವೂರು ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.






























































































































