
ಚಿಕ್ಕಮಗಳೂರು: ರಾಜ್ಯದ ಕರಾವಳಿ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಮಳೆಯ ಅಬ್ಬರಕ್ಕೆ ಮತ್ತೆ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಬೃಹತ್ ಮರವೊಂದು ದರೆಗುರುಳಿದೆ.
ಮರ ರಸ್ತೆ ಗುರುಳಿದ ಪರಿಣಾಮವಾಗಿ ಮತ್ತೆ ಕೊಟ್ಟಿಗೆಹಾರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಾರಿ ಮಳೆಯ ನಡುವೆಯೂ ಮರತೆರವು ಕಾರ್ಯ ನಡೆಸಲಾಗುತ್ತಿದೆ. ಇನ್ನು ಶೃಂಗೇರಿಯ ಬಳಿಯ ತುಂಗಾ ನದಿ ಸೇತುವೆ ಮೇಲೆ ನೀರು ಹರಿಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.











