
ಮಧ್ಯಪ್ರಾಚ್ಯದ ಯುದ್ಧದ ಪರಿಣಾಮ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಇದೀಗ ವಾಣಿಜ್ಯ ಬಳಕೆಯ ಸಿಲಿಂಡರ್ ನ ಬೆಲೆ ರೂ. 218 ರಷ್ಟು ಏರಿಕೆಯಾಗಿದೆ.
ಈಗಾಗಲೇ ಹೋಟೆಲ್ ವ್ಯವಹಾರ ಮತ್ತು ಇತರ ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದು, ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಮಾರ್ಚ್ ನಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇಂದು ಮತ್ತೆ ಬೆಲೆ ಏರಿಕೆ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಏಪ್ರಿಲ್ 1ರಿಂದಲೇ ಹೊಸದರ ಅನ್ವಯವಾಗಲಿದ್ದು ,ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.






















































