28.9 C
Udupi
Tuesday, July 14, 2026
spot_img
spot_img
HomeBlogಮದುವೆಯಾಗಿ ನಾಲ್ಕೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನವವಿವಾಹಿತೆ ಆತ್ಮಹತ್ಯೆ

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನವವಿವಾಹಿತೆ ಆತ್ಮಹತ್ಯೆ

ಬೆಂಗಳೂರು: ನಗರದಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ 25 ವರ್ಷದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಮೂಲದ ಶ್ವೇತಾ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ನಾಲ್ಕು ತಿಂಗಳ ಹಿಂದೆ ಪ್ರೀತಿಸಿದ ಯುವಕನನ್ನು ವಿವಾಹವಾಗಿದ್ದರು.

ಆತ್ಮಹತ್ಯೆಗೆ ಮುನ್ನ ಶ್ವೇತಾ ಡೆತ್‌ನೋಟ್ ಬರೆದಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ತಮ್ಮ ಸಾವಿಗೆ ಪತಿ ಹಾಗೂ ಅವರ ಅಕ್ಕನ ಕಿರುಕುಳವೇ ಕಾರಣ ಎಂದು ಆರೋಪಿಸಿರುವುದಾಗಿ ತಿಳಿದುಬಂದಿದೆ.

ಮಾಹಿತಿ ಪಡೆದ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬದವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತೆಯ ಪತಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page