ತಪ್ಪಿತಸ್ಥರ ಮೇಲೆ ಗೂಂಡಾ ಆಕ್ಟ್ ನಂತಹ ಕಠಿಣ ಕ್ರಮ ಕೈಗೊಳ್ಳಿ
ಇತರ ಗಣೇಶೋತ್ಸವಗಳಿಗೂ ಭದ್ರತೆ ಒದಗಿಸಿ..: ಹಿಂದೂ ಜನಜಾಗೃತಿ ಸಮಿತಿ

ಸೆಪ್ಟೆಂಬರ್ 7, 2025 ಭಾನುವಾರ ರಾತ್ರಿ ಚೆನ್ನೇಗೌಡ ಬಡಾವಣೆಯ ನಿವಾಸಿಗಳ ಗಣೇಶೋತ್ಸವ ಮೆರವಣಿಗೆಯು ಮಸೀದಿ ಬಳಿ ಬಂದಾಗ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ. ಮತಾಂಧರ ಈ ನಡೆಯನ್ನು ನೋಡಿದಾಗ ಈ ದಾಳಿ ಸಂಪೂರ್ಣ ಪೂರ್ವ ನಿಯೋಜಿತವಾಗಿದ್ದು ಗಲಭೆ ಸೃಷ್ಠಿಸಲೆಂದೇ ಈ ಷಡ್ಯಂತ್ರವನ್ನು ರೂಪಿಸಿದ್ದಾರೆ. ಈ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಲ್ಲಿ ಕಲ್ಲು ತೂರಾಟ ಮತ್ತು ಪೆಟ್ರೋಲ್ ಬಾಂಬ್ ಗಳನ್ನು ಹಿಂದೂ ಅಂಗಡಿಗಳ ಮೇಲೆ ಹಾಕಿ ಕೋಟ್ಯಾಂತರ ರೂಪಾಯಿ ನಷ್ಟ ಮಾಡಿರುವ ಕಹಿ ಘಟನೆಯ ನೆನಪುಗಳು ಇರುವಾಗಲೇ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಎಲ್ಲಾ ಗಣೇಶ ಮಂಡಳಿಯು ಸುರಕ್ಷತಾ ಭದ್ರತೆಯನ್ನು ಒದಗಿಸಲು ಮನವಿ ಮಾಡಿದ ನಂತರವೂ ಹಿಂದೂ ಗಣೇಶೋತ್ಸವದ ಮೆರವಣಿಗೆಯ ಮೇಲೆ ಮಾರಣಾಂತಿಕ ಆಕ್ರಮಣವಾಗಿರುವುದು ಅತ್ಯಂತ ಖಂಡನೀಯವಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ ? ಸಾರ್ವಜನಿಕ ಗಣೇಶೋತ್ಸವ, ನವರಾತ್ರಿ, ರಾಮನವಮಿ, ಹನುಮಾನ್ ಜಯಂತಿ ಪ್ರತಿಯೊಂದು ಮೆರವಣಿಗೆ ಮೇಲೆಯೂ ಕಲ್ಲು ತೂರಾಟ ಆಗುತ್ತಿದೆ. ಇದರಿಂದ ಗಮನಕ್ಕೆ ಬರುವುದೇನೆಂದರೆ
ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ಬಹು ಸಂಖ್ಯಾತ ಹಿಂದೂಗಳ ಮೇಲೆ ಮಾರಣಾಂತಿಕ ಅಕ್ರಮಗಳಾಗುತ್ತಿದೆ. ಆದುದರಿಂದ ರಾಜ್ಯ ಸರ್ಕಾರವು ಈ ಕೃತ್ಯಕ್ಕೆ ಕಾರಣಕರ್ತರಾದವರ ಮೇಲೆ ಕೂಡಲೇ ಕ್ರಮಕೈಗೊಳ್ಳಬೇಕು ಮತ್ತು ರಾಜ್ಯಾದ್ಯಂತ ಇನ್ನೂ ಅನೇಕ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಬಾಕಿ ಇದ್ದು ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ಸಮಿತಿಯುಆಗ್ರಹಿಸುತ್ತದೆ ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರರಾದ ಮೋಹನ ಗೌಡ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.