
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣದ ಕುರಿತು ಮಾತನಾಡಿ ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆಯಾಗಿದ್ದು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಕಾನೂನು ಪ್ರಕಾರ ನಡೆದುಕೊಂಡಿದ್ದಾರೆ ಎಂದು ಲಾಠಿ ಚಾರ್ಜ್ ಸಮರ್ಥಿಸಿಕೊಂಡರು.
ಪೊಲೀಸರು ಬೇಡ ಅಂದರೂ ಗುಂಪು ಕಟ್ಟಿಕೊಂಡು ಹೋಗಿದ್ದಾರೆ. ಇಲ್ಲಿ ತನಕ 21 ಜನರ ಬಂಧನ ಆಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಆಗಿದೆ. ಹಿಂದೂಗಳು, ಮುಸ್ಲಿಂ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಲಿದೆ ಎಂದು ಹೇಳಿದರು.
ಬಿಜೆಪಿ ಅವರು ಜನರ ನೆಮ್ಮದಿ ಹಾಳು ಮಾಡುತ್ತಿದ್ದಾರೆ, ಕೋಮುವಾದದಿಂದ ಪಕ್ಷ ಕಟ್ಟಬಾರದು. ಬಿಜೆಪಿ, ಜೆಡಿಎಸ್ ಪ್ರಚೋದನೆ ಮಾಡುತ್ತಿದೆ ಎಂದು ಕಿಡಿಕಾರಿದರು.