
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ ಕೈಗೊಂಡಿದ್ದು ಅದೇನೆಂದರೆ ಪೀಠಕ್ಕೆ ಆಗಮಿಸುವ ಭಕ್ತರು ಆಗಸ್ಟ್ 15 ರಿಂದ ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕು ಎಂದು ತಿಳಿಸಿದೆ.
ಆಗಸ್ಟ್ 15 ರಿಂದ ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ತೆರಳುವ ಭಕ್ತರು ಭಾರತೀಯ ಸಂಪ್ರದಾಯದಂತೆ ವಸ್ತ್ರ ಧರಿಸಿ ಶ್ರೀಗಳ ದರ್ಶನ ಪಡೆಯಬೇಕು. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯವನ್ನು ಧರಿಸಬೇಕು. ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜತೆಗೆ ದುಪ್ಪಟ ಅಥವಾ ಲಂಗ ದಾವಣಿ ಧರಿಸಿ ಶ್ರೀಗಳ ದರ್ಶನ ಪಡೆಯಬಹುದು. ಈ ಉಡುಗೆಗಳನ್ನು ಹೊರತುಪಡಿಸಿ ಇತರೆ ಉಡುಗೆ ತೊಟ್ಟು ಬಂದಲ್ಲಿ ಗುರುನಿವಾಸದ ಒಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸೂಚಿಸಿದೆ








