
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಮಿಲಿಂದ್ ಖರ್ಗೆ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರ ಗಂಭೀರವಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಿಲಿಂದ್ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಭಾನುವಾರ ಸಂಜೆ ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.