
ನವದೆಹಲಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ಹೊರಡಿಸಿದ್ದು ಅದೇನೆಂದರೆ ಮಸೂದೆಗೆ ಸಹಿ ಹಾಕುವ ವಿಷಯದಲ್ಲಿ ಸ್ವತಃ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಿದೆ.
ರಾಜ್ಯಪಾಲರು, ರಾಷ್ಟ್ರಪತಿಗಳು ವಿಧಾನಸಭೆ ಅಂಗೀಕರಿಸಿದ ಮಸೂದೆಗೆ ಸಹಿ ಹಾಕಲು ವಿಳಂಬ ಮಾಡುವ ಅನೇಕ ದೂರುಗಳು ಕೇಳಿಬಂದಿದ್ದು ಇದೀಗ ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ಜಟಾಪಟಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.
ರಾಜ್ಯಪಾಲರು, ರಾಷ್ಟ್ರಪತಿಗಳ ಪರಿಶೀಲನೆಗಾಗಿ ಯಾವ ದಿನಾಂಕಕ್ಕೆ ಮಸೂದೆಯನ್ನು ಕಳುಹಿಸಲಾಗಿತ್ತೋ ಆ ದಿನಾಂಕದಿಂದ ಅನ್ವಯವಾಗುವಂತೆ ಮೂರು ತಿಂಗಳಲ್ಲಿ ನಿರ್ಧರಿಸದಿದ್ದರೆ ಕಾರಣ ಕಡ್ಡಾಯವಾಗಿದ್ದು ಇಲ್ಲವಾದಲ್ಲಿ ರಾಜ್ಯ ಕೋರ್ಟ್ ಗೆ ದೂರು ಸಲ್ಲಿಸಬಹುದು ಎಂದು ಹೇಳಿದೆ.