
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಜಾರಿಗೆ ತರಲು ಮುಂದಾಗಿದ್ದು ಇದೀಗ ಸರ್ಕಾರದ ಈ ಕ್ರಮ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ, ಹೈಕೋರ್ಟ್ ಮೆಟ್ಟಿಲೇಲಿದೆ. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಾಧೀಶರು ಇದೀಗ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದಾರೆ.
ಖಾಸಗಿ ವಲಯದಲ್ಲಿ ಋತುಚಕ್ರ ರಜೆ ಘೋಷಣೆಗೆ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಹೋಟೆಲ್ ಮಾಲೀಕರ ಸಂಘದ ಪರವಾಗಿ ವಕೀಲರಾದ ಪ್ರಶಾಂತ್ ಬಿ.ಕೆ. ವಾದ ಮಂಡನೆ ಮಾಡಿದ್ದು ವಾದ ಆಲಿಸಿದ ಹೈಕೋರ್ಟ್ ನ್ಯಾಯಧೀಶೆ ಜ್ಯೋತಿ ಮುಲಿಮನೆ ಋತುಚಕ್ರದ ರಜೆ ನೀಡಿ ಸರ್ಕಾರ ಮಾಡಿದ್ದ ಆದೇಶಕ್ಕೆ ತಡೆ ನೀಡಿದ್ದಾರೆ.



















