
ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬ್ರಹ್ಮಾವರ ಪೊಲೀಸರು ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದಕ್ಕೆ ಮಹೇಶ್ ತಿಮರೋಡಿಯನ್ನು ಬಂಧಿಸಿ ಆನಂತರ ಕೋರ್ಟ್‌ಗೆ ಹಾಜರುಪಡಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಹಿರಿಯಡ್ಕ ಸಬ್ ಜೈಲಿನಲ್ಲಿರುವ ಮಹೇಶ್ ತಿಮರೋಡಿ ಪ್ರತ್ಯೇಕ ಸೆಲ್‌ನಲ್ಲಿ ಚಡಪಡಿಸುತ್ತಿದ್ದು ಅವರ ಭೇಟಿಗೆ ಬಂದ ಬೆಂಬಲಿಗರಿಗೆ ಅವಕಾಶವೂ ಸಿಕ್ಕಿಲ್ಲ. ಬಿಪಿ ಏರುಪೇರು ಆದ ಕಾರಣ ವೈದ್ಯರನ್ನು ಕರೆಸಿ ತಪಾಸಣೆ ಮಾಡಿಸಲಾಗಿದೆ.
ಇಂದು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು ತಿಮರೋಡಿಗೆ ಬೇಲ್ ಸಿಗುತ್ತದೆಯೋ ಇಲ್ಲವೋ ಎಂದು ಕಾದು ನೋಡಬೇಕಿದೆ.