ಬೆಂಗಳೂರು: ಮಾಜಿ ಸಿಎಂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ(ಎಸ್ ಎಂ ಕೃಷ್ಣ) ನಿನ್ನೆ ನಿಧನರಾಗಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿ ನಡೆಯಲಿದೆ.
ಇಂದು ಸಂಜೆ ಮೂರು ಗಂಟೆಯ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವಿರಲಿದೆ. ಸಿಎಂ ಸಿದ್ದರಾಮಯ್ಯ, ಪ್ರಹ್ಲಾದ್ ಜೋಶಿ ಕುಮಾರಸ್ವಾಮಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಸ್ವಾಮೀಜಿಗಳು ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಹುಟ್ಟುರಾದ ಸೋಮನಹಳ್ಳಿಯಲ್ಲಿ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ . ಒಕ್ಕಲಿಕ ಸಂಪ್ರದಾಯದಂತೆ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ 15ಕ್ಕೂ ಹೆಚ್ಚು ವೈದಿಕರಿಂದ ವಿಧಿ ವಿಧಾನ ಕಾರ್ಯಗಳು ನಡೆಯಲಿದೆ.