
ಸರಕಾರಿ ಪದವಿಪೂರ್ವ ಕಾಲೇಜು ಸಾಣೂರಿನಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ,ಪೋಕ್ಸೊ,ಸೈಬರ್ ಕ್ರೈಮ್ ವಿರೋಧಿ ಜಾಗೃತಿ ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ಸುಚೇತ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಕಳ ಪೊಲೀಸ್ ಠಾಣೆಯ ಉಪನಿರೀಕ್ಷರಾದ ಜಯಂತ್ ಇವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅವಧಿಯಲ್ಲಿ ಹೇಗೆ ಮಾದಕ ದ್ರವ್ಯದ ಕಡೆಗೆ ಆಕರ್ಷಿತರಾಗುತ್ತಾರೆ, ಅದು ಹೇಗೆ ಚಟವಾಗಿ ಬೆಳೆದು ಬಿಡುತ್ತದೆ ಎಂಬುದನ್ನು ವಿವರಿಸುತ್ತಾ ವಿದ್ಯಾರ್ಥಿಗಳನ್ನು ಜಾಗೃತವಾಗಿರುವಂತೆ ಕರೆ ನೀಡಿದರು ಸೈಬರ್ ಕ್ರೈಮ್ ಹಾಗೂ ಪೋಕ್ಸೊ ವಿಷಯಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳ ಉದಾಹರಣೆ ನೀಡುತ್ತಾ,ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು,ಸಂಚಾರಿ ನಿಯಮಗಳನ್ನು ಪಾಲಿಸಿ,ಎಚ್ಚರಿಕೆಯಿಂದ ಇರುವಂತೆ ಸಲಹೆ ಇತ್ತರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಅರ್ಥಶಾಸ್ತ್ರ ಉಪನ್ಯಾಸಕರಾದ ಅರವಿಂದ್ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
.