28.2 C
Udupi
Friday, June 26, 2026
spot_img
spot_img
HomeBlogಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ : ಜಿಲ್ಲಾ ಪೊಲೀಸ್ ಹೆಡ್ ಕಾನ್ಸ್ಟೇಬಲ್...

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ : ಜಿಲ್ಲಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಂತೋಷ್

ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು, ಕಾರ್ಕಳ “ನಶಾ ಮುಕ್ತ ಭಾರತ ಅಭಿಯಾನ”

ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಹಾಗೂ ಇಂಟರ್ಯಾಕ್ಟ್ ಕ್ಲಬ್ ಇವರ ಸಹಕಾರದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಉಡುಪಿ ಜಿಲ್ಲಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿ ನೀಡಿದರು.
ಇಂದಿನ ಕಾರ್ಯಕ್ರಮ ಯುವ ಜನತೆಯಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಕಾನೂನಿನ ಅರಿವನ್ನು ಬೆಳೆಸುವ ಮಹತ್ವದ ಉದ್ದೇಶವನ್ನು ಹೊಂದಿದೆ. ಮಾದಕ ವಸ್ತುಗಳಿಗೆ ಬಲಿಯಾಗುವುದು ಎಷ್ಟು ಹಾನಿಕಾರವೊ ಅವರ ಸಂಪರ್ಕವದಲ್ಲಿರುವುದು ಕೂಡ ಅಷ್ಟೇ ಹಾನಿಕಾರಕ ವಾಗಿದೆ. ಆದ್ದರಿಂದ
ವ್ಯಸನಗಳಿಂದ ದೂರವಿರಿ. ಜೀವನವನ್ನು ಪ್ರೀತಿಸಿ. ಕಾನೂನನ್ನು ಗೌರವಿಸಿ. ಉತ್ತಮ ಪ್ರಜೆಗಳಾಗಿ ಜೀವಿಸಿ ಎಂದ ಅವರು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಇಂಟರ್ಯಾಕ್ಟ್ ಕ್ಲಬ್ಬಿನ ಅಧ್ಯಕ್ಷೆ ಕುಮಾರಿ ವಿಶ್ವರಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ ಅಧ್ಯಕ್ಷತೆಯನ್ನು ವಹಿಸಿದ್ದರು.


ಇಂಟರ್ಯಾಕ್ಟ್ ಕ್ಲಬ್ಬಿನ ಕಾರ್ಯದರ್ಶಿ ಕುಮಾರಿ ಅರ್ಪಿತ ವಂದಿಸಿದರು. ಇಂಟರ್ಯಾಕ್ಟ್ ಕ್ಲಬ್ಬಿನ ಸಂಯೋಜಕರಾದ ದೇವದಾಸ್ ಕೆರೆಮನೆ ಸ್ವಾಗತಿಸಿ ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page