
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಸಂಬಂಧ ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿದ್ದು ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಇಂದು ರೈತರು ಮತ್ತು ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.













