
ಬೆಂಗಳೂರು: ಶಾಲಾ ಅವಧಿಯಲ್ಲಿ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಮಾಹಿತಿ ನೀಡದೆ ಬೇಕಾಬಿಟ್ಟಿ ಸಭೆ-ಸಮಾರಂಭಗಳಿಗೆ ಹೋಗುವುದಕ್ಕೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಿದೆ.
ಈ ಕುರಿತು ಆದೇಶ ಹೊರಡಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಇನ್ನು ಮುಂದೆ ಸಭೆ, ಸಮಾರಂಭಗಳಿಗೆ ಹೋಗುವ ಮುನ್ನ ಮುಖ್ಯ ಶಿಕ್ಷಕರು ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕು. ಮಾಹಿತಿ, ಆಹ್ವಾನ ಪತ್ರಿಕೆ, ಸಭಾ ಸೂಚನೆ ಪತ್ರವನ್ನು ಕಡ್ಡಾಯವಾಗಿ ನಮೂದಿಸಿ ಹೋಗಬೇಕು. ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.