
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆ ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರು ಇಲ್ಲಿ ಆಯೋಜಿಸಿರುವ ಮಿನಿ ಒಲಂಪಿಕ್ ಕ್ರೀಡಾಕೂಟ 2024 ರಲ್ಲಿ ನಮ್ಮ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿನಿಯರಾದ ಕುಮಾರಿ ಸೌಮ್ಯ 9ನೇ ತರಗತಿ ಮತ್ತು ಅನ್ವಿತಾ 10ನೇ ತರಗತಿ ಇವರು ವೈಟ್ ಲಿಫ್ಟಿಂಗ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರಭಾವತಿ ಮತ್ತು ಪ್ರಿಯಾ ಪ್ರಭು ತರಬೇತಿಯನ್ನು ನೀಡಿರುತ್ತಾರೆ. ಇವರ ಈ ಶ್ರೇಷ್ಠ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಾದ ನೇಮಿರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.



















