
ಮುಂಬೈ: ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ (86) ನಿಧನರಾಗಿದ್ದಾರೆ
ಟಾಟಾ ಅವರನ್ನು ಕಳೆದ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆಸ್ಪತ್ರೆಯ ಹಿರಿಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿತ್ತು ಆದರೆ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಟಾಟಾ ಇದೀಗ ನಿಧನ ಹೊಂದಿದ್ದಾರೆ.













