
ಹೊಸದಿಲ್ಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆಮ್ ಆದ್ಮಿ ಪಕ್ಷ ಸೋಲು ಕಂಡ ಬೆನ್ನಲ್ಲೇ ದಿಲ್ಲಿ ಮುಖ್ಯಮಂತ್ರಿ ಅತಿಶಿ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷವು 2020 ರ ವಿಧಾನಸಭಾ ಚುನಾವಣೆಯಲ್ಲಿ 70 ಸದಸ್ಯ ಬಲದ, ದಿಲ್ಲಿ ವಿಧಾನಸಭೆಯಲ್ಲಿ 62 ಸ್ಥಾನಗಳ ಭಾರಿ ಬಹುಮತ ಪಡೆದಿದ್ದು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಹೀನಾಯ ಸೋಲು ಕಂಡಿದೆ.
ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಬಹುತೇಕ ನಾಯಕರು ಸೋಲನ್ನು ಅನುಭವಿಸಿದ್ದು ದಕ್ಷಿಣ ದಿಲ್ಲಿಯ ಕಲ್ಕಜಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಅತಿಶಿಯವರು ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿಯನ್ನು ಸೋಲಿಸುವ ಮೂಲಕ ಜಯಗಳಿಸಿದ್ದಾರೆ.