
ಮೈಸೂರು: ಇ.ಡಿ ಮತ್ತು ಲೋಕಾಯುಕ್ತ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ಚುರುಕುಗೊಳಿಸಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನೋಟಿಸ್ ನೀಡುವ ಸಾಧ್ಯತೆಯಿದೆ.
ಈಗಾಗಲೇ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದ್ದು ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಬಾಕಿ ಇದೆ. ಮುಡಾ ಪ್ರಕರಣದಲ್ಲಿ ಸುಮಾರು 3 ಗಂಟೆಗಳ ಕಾಲ ಸಿಎಂ ಪತ್ನಿಯನ್ನು ಲೋಕಾಯುಕ್ತ ವಿಚಾರಣೆ ನಡೆಸಿದ್ದು ಸಿಎಂಗೆ ನೋಟಿಸ್ ನೀಡಲು ಲೋಕಾಯುಕ್ತ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಪತ್ನಿ ಪಾರ್ವತಮ್ಮ ವಿಚಾರಣೆಯ ಟಿಪ್ಪಣಿ ಬರೆಯುತ್ತಿದ್ದು ಈ ಕಾರ್ಯ ಮುಗಿದ ಮೇಲೆ ಸಿಎಂಗೆ ನೋಟಿಸ್ ನೀಡುವ ಸಾಧ್ಯತೆ ಇದೆ.







