
ಧಾರವಾಡ: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಂಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ 10 ದಿನಗಳ ಕಾಲ ತಾತ್ಕಾಲಿಕ ರಿಲೀಫ್ ನೀಡಿದೆ.
ಹಿರಿಯ ವಕೀಲ ಸಿವಿ ನಾಗೇಶ್ ಅವರು ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿ ಬೈರತಿ ಸುರೇಶ್ 2023ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಇಡಿ ಪ್ರಶ್ನಾವಳಿಯಲ್ಲಿ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಮಾಹಿತಿ ಎಲ್ಲಾ ನೀಡಿ ಎಂದು ಸಮನ್ಸ್ ಮಾಡಿದೆ. ಎಲ್ಲರ ಮಾಹಿತಿಯನ್ನು ಬ್ಯಾಂಕ್ ಡಿಟೈಲ್ಸ್ ಕೊಡಬೇಕೆಂದು ಇಡಿ ಕೇಳುತ್ತಿದೆ. ಸುರೇಶ್ ಗೂ ಈ ಪ್ರಕರಣ ಯಾವುದೇ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರು ಆರೋಪಿಯೂ ಅಲ್ಲ, ಆದರೂ ಕೂಡ ಇಡಿ ಸಮನ್ಸ್ ನೀಡಿದೆ. ಹೀಗಾಗಿ ಕೋರ್ಟ್ ಗೆ ಬಂದಿದ್ದೇವೆ ಎಂದು ವಾದ ಮಂಡಿಸಿದರು.
ಇತ್ತ ಸಂದೇಶ್ ಚೌಟ ಸಿಎಂ ಪತ್ನಿ ಪಾರ್ವತಿ ಪರ ವಾದ ಮಂಡಿಸಿದ್ದು ಪ್ರಕರಣದಲ್ಲಿ ಸೈಟ್‌ಗಳನ್ನು ವಾಪಸ್ ಮಾಡಲಾಗಿದೆ. ಅಕ್ರಮ ಹಣ ವಗಾರ್ವಣೆ ಪ್ರಶ್ನೆಯೇ ಬರುವುದಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಆದರೆ ನಟೇಶ್ ಪ್ರಕರಣದಲ್ಲಿ ಇಡಿಯ ದಾಳಿ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದು ಹೇಳಿದರು.
ಇದನ್ನು ಆಲಿಸಿದ ಧಾರವಾಡ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರು ಇಡಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಿ ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿ ಅಲ್ಲಿಯವರೆಗೆ 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.