30.8 C
Udupi
Saturday, April 25, 2026
spot_img
spot_img
HomeBlogಮುಡಾ ಸೈಟ್ ಹಿಂತಿರುಗಿಸಿರುವುದು ಒಳ್ಳೆಯ ವಿಚಾರ: ಗೃಹ ಸಚಿವ ಜಿ.ಪರಮೇಶ್ವರ್

ಮುಡಾ ಸೈಟ್ ಹಿಂತಿರುಗಿಸಿರುವುದು ಒಳ್ಳೆಯ ವಿಚಾರ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಸಿಎಂ ಪತ್ನಿ ಮುಡಾ ಸೈಟ್ ವಾಪಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್ ಮುಡಾ ಸೈಟ್ ವಾಪಾಸ್ ನೀಡಿರುವುದು ಒಳ್ಳೆಯ ನಿರ್ಧಾರ ಎಂದಿದ್ದಾರೆ.

ಸ್ವಾಭಾವಿಕವಾಗಿ ಮನೆಯಲ್ಲಿ ಯಜಮಾನರಿಗೆ ತೊಂದರೆ ಆಗುತ್ತಿದೆ ಅಥವಾ ತೇಜೋವಧೆ ಆಗುತ್ತಿದೆ ಎನ್ನವುದು ಅವರಿಗೆ ಗೊತ್ತಾಗಿದೆ. ಅದಕ್ಕಾಗಿ ವಾಪಸ್ ಮಾಡುತ್ತೇನೆ ಎಂದಿದ್ದಾರೆ. ಇದೊಂದು ಒಳ್ಳೆಯ ನಿರ್ಧಾರ ಅನಿಸುತ್ತದೆ. ತನಿಖೆ ಇರಲಿ ಆಪಾದನೆ ಬಂದ ತಕ್ಷಣ ಇದು ಸತ್ಯ ಆಗುವುದಿಲ್ಲ. ಆದರೆ ಇಷ್ಟು ದಿನ ರಾಜಕೀಯಕ್ಕೆ ಉಪಯೋಗಿಸುತ್ತಿದ್ದಾರೆ ಎನ್ನುವುದು ಅವರ ಅಭಿಪ್ರಾಯ ಅಷ್ಟೇ ಎಂದು ಹೇಳಿದರು.

ಕಾನೂನು ದೃಷ್ಟಿಯಲ್ಲಿ ಸರೆಂಡರ್ ಮಾಡಿದ ಮೇಲೆ ಮುಂದೆ ಏನಾಗುತ್ತದೆ ಎಂದು ಗೊತ್ತಿಲ್ಲ. ರಾಜಕೀಯಕ್ಕೆ ಉಪಯೋಗ ಮಾಡುತ್ತಿದ್ದಾರೆ. ನನಗೆ ಮರ್ಯಾದೆ ಮುಖ್ಯ ಅನ್ನುವುದು ಅವರ ಭಾವನೆಯಾಗಿದೆ. ಹಾಗಾಗಿಯೇ ಮುಡಾ ಸೈಟುಗಳನ್ನು ವಾಪಸ್ ನೀಡಿದ್ದಾರೆ. ಆದರೆ ಮುಡಾ ವಿಚಾರ ಬಿಜೆಪಿಯವರಿಗೆ ರಾಜಕೀಯಕ್ಕೆ ಉಪಯೋಗ ಆಗುತ್ತಿದೆ ಎನ್ನುವುದು ಖಾತ್ರಿಯಾಗಿದೆ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page