28.2 C
Udupi
Friday, April 3, 2026
spot_img
spot_img
HomeBlogಮುದ್ರಾಡಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನೆ

ಮುದ್ರಾಡಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನೆ

spot_imgspot_img

ಹೆಬ್ರಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಪಾತ್ರವೂ ಮುಖ್ಯ. ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಾಗ ನಾವು ಬೆಳೆಯಲು ಸಾಧ್ಯ. ನಮ್ಮ ಪರೀಕ್ಷೆಗಳಲ್ಲಿ ಅಂಕ ಗಳಿಸಲೂ ಇದು ಸಹಕಾರಿ. ಉತ್ತಮ ಶಿಸ್ತು, ನಾಯಕತ್ವ ಗುಣ, ಸೇವಾ ಮನೋಭಾವ ಸಹಿತ ಆದರ್ಶ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಂಘಗಳ ಚಟುವಟಿಕೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಸ್ನೇಹಲತಾ ಟಿ. ಜಿ. ಯವರು ಹೇಳಿದರು. ಅವರು ಮುದ್ರಾಡಿಯ
ಎಂ.ಎನ್. ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳನ್ನು ದೀಪಬೆಳಗಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿ ನಾಯಕ ಮತ್ತು ಮಂತ್ರಿಮಂಡಲದ ಮಂತ್ರಿಗಳಿಗೆ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಭಟ್ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕಿ ಶ್ಯಾಮಲಾ ಅವರು ವಿದ್ಯಾರ್ಥಿ ಸರಕಾರ, ಕನ್ನಡ ಸಾಹಿತ್ಯ ಸಂಘ, ಕಲ್ಪನಾ ಪರಿಸರ ಸಂಘ, ಆರೋಗ್ಯ ಸಂಘ, ವಿಜ್ಞಾನ ಸಂಘ, ನೇತಾಜಿ ಮತದಾರರ ಸಾಕ್ಷರತ ಸಂಘ, ವೃತ್ತಿ ಮಾರ್ಗದರ್ಶನ ಸಂಘಗಳ ಮೂಲಕ ನಡೆಸಲಾಗುವ ಕಾರ್ಯಚಟುವಟಿಕೆಗಳ ವಿವರವನ್ನು ವಾಚಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎನ್. ಎಂ. ಎಂ. ಎಸ್. ಪರೀಕ್ಷೆಯಲ್ಲಿ ಆಯ್ಕೆಯಾದ ಶೋಭಿತ್ ಯು. ಪೂಜಾರಿ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿಯ ಪ್ರಯುಕ್ತ ಹೆಬ್ರಿ ತಾಲೂಕು ಆಡಳಿತ ನಡೆಸಿದ ಸ್ಪರ್ಧೆಯಲ್ಲಿ ಪ್ರಬಂಧದಲ್ಲಿ ಸಮಾಧಾನಕರ ಬಹುಮಾನ ಪಡೆದ ಪ್ರತೀಕ್ಷಾ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.ಹಾಗೂ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಕಾರ್ತಿಕ್, ಅಂಜಲಿ, ಪ್ರತೀಕ್ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಾಗರ ಎಜ್ಯುಕೇಶನ್ ಟ್ರಸ್ಟ್ (ರಿ) ನ ಕಾರ್ಯದರ್ಶಿಯವರಾದ ಅಶೋಕ ಕುಮಾರ್ ಶೆಟ್ಟಿ ವಹಿಸಿದ್ದರು. ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಪಿ. ವಿ.ಆನಂದ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕ ಚಂದ್ರಶೇಖರ ಭಟ್ ಸ್ವಾಗತಿಸಿದರು. ಹಿರಿಯ ಶಿಕ್ಷಕ ಮಹೇಶ ನಾಯ್ಕ ಕೆ. ವಂದಿಸಿದರು. ವಿದ್ಯಾರ್ಥಿ ಸಂಘದ ಮಾರ್ಗದರ್ಶಿ ಶಿಕ್ಷಕ ಶ್ರೀ ರಘುಪತಿ ಹೆಬ್ಬಾರ್,ಚಂದ್ರಕಾಂತಿ ಹೆಗ್ಡೆ, ಮಹೇಶ ಎಂ. ಸಹಕರಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page