
Hahhss
ಲಕ್ನೋ: ಅಸ್ಸಾಂ ರಾಜ್ಯ ಸರ್ಕಾರವು ಹೋಟೆಲ್ ಮತ್ತು ಕಾರ್ಯಕ್ರಮದ ಸ್ಥಳಗಳಲ್ಲಿ ಗೋಮಾಂಸ ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಇಸ್ಲಾಮಿಕ್ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಿಜ್ವಿ ಬರೇಲ್ವಿ ಮುಸ್ಲಿಮರು ಗೋಮಾಂಸ ಸೇವನೆಯನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.
ಗೋಮಾಂಸ ನಿಷೇಧವು ಮುಸ್ಲಿಂ ಸಮುದಾಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇಸ್ಲಾಂ ಗೋಮಾಂಸ ಸೇವನೆಯನ್ನು ಕಡ್ಡಾಯ ಮಾಡುವುದಿಲ್ಲ. ಜನರು ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ತಿನ್ನುತ್ತಾರೆ ಮತ್ತು ಕುಡಿಯುತ್ತಾರೆ ಎಂದು ಧರ್ಮಗುರು ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ವಿರೋಧಿ ಮನಸ್ಥಿತಿ ಹೊಂದಿದ್ದಾರೆ. ಯಾವಾಗಲೂ ಮುಸ್ಲಿಮರ ವಿರುದ್ಧ ಮಾತನಾಡುತ್ತಾರೆ. ಅವರ ಚಿಂತನೆಯು ಮುಸ್ಲಿಂ ವಿರೋಧಿಯಾಗಿದೆ. ಮುಸ್ಲಿಮರು ಗೋಮಾಂಸವಿಲ್ಲದೆ ಬದುಕಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ನಂಬಿರುವಂತಿದೆ. ಅಸ್ಸಾಂನಲ್ಲಿರುವ ಮುಸ್ಲಿಮರು ಗೋಮಾಂಸ ತಿನ್ನದೆ ಬದುಕುವಂತೆ ನಾನು ಕರೆ ನೀಡುತ್ತೇನೆ. ಜೀವನ ಮತ್ತು ಸಾವು ದೇವರ ಕೈಯಲ್ಲಿದೆ ಎಂದು ಹೇಳಿದ್ದಾರೆ.



















