
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿದ್ದ ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ ಬಿ.ಜಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತರು ಮೂಡುಬಿದರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಯ ಪತ್ನಿಯು ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಉತ್ತರ ಉಪವಿಭಾಗದ ಎಸಿಪಿ ಗೆ ಸೂಚನೆ ನೀಡಿದ್ದು ಇದೀಗ ಅವರು ತನಿಖೆ ನಡೆಸಿ ವರದಿ ನೀಡಿದ್ದಾರೆ.
ಈ ವರದಿಯಲ್ಲಿ ಹಲವು ಪ್ರಮುಖ ಅಂಶಗಳು ಬೆಳಕಿಗೆ ಬಂದಿದ್ದು ಈ ಆಧಾರದ ಮೇಲೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ ಬಿ.ಜಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.






