
ಮೂಡುಬಿದಿರೆ: ಕೂಲಿ ಕಾರ್ಮಿಕನಾಗಿರುವ ತಂದೆಯೊಬ್ಬ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಪೊಲೀಸರು ಆತನನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಇತ್ತೀಚಿಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆರೋಪಿ ತಂದೆಯೇ ಆಕೆಯನ್ನು ಮಂಗಳೂರಿನ ಲೇಡಿ ಗೋಶನ್ ಆಸ್ಪತ್ರೆಗೆ ಕರೆತಂದಿದ್ದು ತಪಾಸಣೆ ಮಾಡಿದ ಬಳಿಕ ವೈದ್ಯರು ಆಕೆ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ತಿಳಿಸಿದ್ದಾರೆ.
ಪೊಲೀಸರು ಈ ಕುರಿತು ಬಾಲಕಿಯ ತಂದೆಯನ್ನು ವಿಚಾರಣೆ ನಡೆಸಿದಾಗ ಮೊದಲಿಗೆ ಆತ ಬೇರೆಯವರ ಹೆಸರು ಹೇಳಿದ್ದಾನೆ. ಆದರೆ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ತಪ್ಪು ಒಪ್ಪಿಕೊಂಡಿದ್ದಾನೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲಿಸಿ ಮೂಡುಬಿದಿರೆ ಪೊಲೀಸರು ಗುರುವಾರ ಆತನನ್ನು ಬಂಧಿಸಿದ್ದಾರೆ.













