ಕಾರ್ಕಳ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ಉಡುಪಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ರಜತಾದ್ರಿ, ಮಣಿಪಾಲ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಕಾರ್ಕಳ. ಇವರ ಸಹಯೋಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ.14 ಮತ್ತು 17 ರ ವಯೋಮಿತಿಯ ಬಾಲಕಿಯರ ಕಲಾತ್ಮಕ ಜೋಡಿ ಯೋಗಾಸನದಲ್ಲಿ.17 ವಯೋಮಿತಿಯ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಮಾನ್ವಿ ಜಿ. ಮತ್ತು ಶ್ರಾವಣಿ ಭಟ್ ದ್ವಿತೀಯ ಸ್ಥಾನ ಹಾಗೂ 14 ವಯೋಮಿತಿಯ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಸಿಯಾ ಶೆಟ್ಟಿ ಮತ್ತು ಶಾರ್ವಿ ಹೆಗ್ಡೆ ದ್ವಿತೀಯ ಸ್ಥಾನವನ್ನುಗಳಿಸಿರುತ್ತಾರೆ. ಇವರನ್ನು ಶಾಲಾ ಅಧ್ಯಕ್ಷರು ಮತ್ತು ಸದಸ್ಯರು , ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದರು.






















































