ಎಸ್ ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ವರ್ಷದ ಸರಣಿ ಕಾರ್ಯಕ್ರಮ

ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವರ್ಷದ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ದಾಮೋದರ ಶರ್ಮ “ಅಪ್ಪ ಅಮ್ಮನ ಮಡಿಲು” ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಐ ರವೀಂದ್ರನಾಥ್ ಪೈ, ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಕಾಲೇಜಿನ ಪ್ರಾಧ್ಯಾಪಕರು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ ಕಾರ್ಕಳ ಕಮಲಾಕ್ಷ ಕಾಮತ್ ವಹಿಸಿದ್ದರು.
9ನೇ ತರಗತಿಯ ಕುಮಾರಿ ದೀಕ್ಷಾ ಸ್ವಾಗತಿಸಿದರು. ಮಾ. ಸುದೀಪ್ ಪರಿಚಯಿಸಿದರು. ಕುಮಾರಿ ಸಮೀಕ್ಷಾ ವಂದಿಸಿದರು, ಕುಮಾರಿ ತನ್ವಿ ನಿರೂಪಿಸಿದರು.





